ದೇಶದ ಪ್ರಮುಖ ಬ್ಯಾಂಕ್‌ಗಳಾದ ಎಸ್‌ಬಿಐ, ಪಿಎನ್‌ಬಿ ಮತ್ತು ಐಸಿಐಸಿಐ ಬ್ಯಾಂಕ್‌ಗಳು ಈಗಾಗಲೇ ಬಡ್ಡಿ ದರ ಏರಿಕೆ ಘೋಷಿಸಿದ್ದು, ಕೊಟಾಕ್ ಮಹೀಂದ್ರ್ ಬ್ಯಾಂಕ್ ಕೂಡಾ ಸಾಲದ ಮೇಲಿನ ಬಡ್ಡಿ ದರದಲ್ಲಿ ಶೇ.0.25ರಷ್ಟು ಏರಿಕೆಗೊಳಿಸಿದ್ದು, ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
ಒಂದು ವರ್ಷದೊಳಗಿನ ಠೇವಣಿ ಬಡ್ಡಿ ದರದಲ್ಲಿ ಶೇ.0.25ರಷ್ಟು ಹೆಚ್ಚಳಹೊಳಿಸಿದ್ದು, ಸಾಲದ ಮೇಲಿನ ಬಡ್ಡಿ ದರದಲ್ಲಿ ಕೂಡಾ ಏರಿಕೆ ಮಾಡಲಾಗಿದೆ ಎಂದು ಬ್ಯಾಂಕ್‌ನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ಪ್ರಮುಖ ಬ್ಯಾಂಕ್‌ಗಳಾದ, ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾ ಮತ್ತು ಐಸಿಐಸಿಐ ಬ್ಯಾಂಕ್‌ಗಳು ಕೂಡಾ ಸಾಲದ ಬಡ್ಡಿ ದರ ಹಾಗೂ ಠೇವಣಿ ಬಡ್ಡಿದರದಲ್ಲಿ 50 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಳಗೊಳಿಸಿವೆ.
ಏತನ್ಮಧ್ಯೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬಡ್ಡಿ ದರದಲ್ಲಿ ಶೇ.0.5ರಷ್ಟು ಹಾಗೂ ಸ್ಥಿರ ಠೇವಣಿ ಬಡ್ಡಿ ದರದಲ್ಲಿ ಶೇ.1.5ರಷ್ಟು ಹೆಚ್ಚಳಗೊಳಿಸಿದೆ. ಐಸಿಐಸಿಐ ಬ್ಯಾಂಕ್ ಸಾಲದ ಬಡ್ಡಿ ದರವನ್ನು ಶೇ.16.25ಕ್ಕೆ ನಿಗದಿಪಡಿಸಿದೆ.
ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಬ್ಯಾಂಕ್‌ಗಳು ಬಡ್ಡಿ ದರ ಏರಿಕೆ ಪ್ರಕಟಿಸಿದ ಕೆಲ ದಿನಗಳ ನಂತರ, ಬ್ಯಾಂಕ್‌ಗಳು ಬಡ್ಡಿ ದರ ಏರಿಕೆ ಘೋಷಿಸುವುದಿಲ್ಲ ಎನ್ನುವ ಆಶಾಭಾವನೆಯನ್ನು ಹೊಂದಿರುವುದಾಗಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.