ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ,ಡಾಲರ್ ಎದುರಿಗೆ ರೂಪಾಯಿ ಮೌಲ್ಯ ದುರ್ಬಲಗೊಂಡಿದೆ. ಆದರೆ, ದೇಶಿಯ ಶೇರುಪೇಟೆ ಚೇತರಿಕೆ ಕಂಡಿದ್ದರಿಂದ ರೂಪಾಯಿ ಮೌಲ್ಯದ ಇಳಿಕೆಯಲ್ಲಿ ಅಲ್ಪ ಕುಸಿತವಾಗಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಅಲ್ಪ ಕುಸಿತ ಕಂಡು ಡಾಲರ್ ಎದುರಿಗೆ 46.64/65 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಸಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಕುಸಿತ ಕಂಡಿದೆ.
ಮುಂಬೈ ಶೇರುಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.3ರಷ್ಟು ಏರಿಕೆಯಾಗಿದ್ದು, ಇನ್ಫೋಸಿಸ್ ಟೆಕ್ನಾಲಾಜೀಸ್ ಮತ್ತು ಎಚ್‍ಡಿಎಫ್‌ಸಿ ಬ್ಯಾಂಕ್ ಶೇರುಗಳು ವಹಿವಾಟಿನಲ್ಲಿ ಏರಿಕೆ ಕಂಡಿವೆ.