ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಏರಿಕೆಯಾಗಿ 46.62 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ 9 ಪೈಸೆ ಏರಿಕೆ ಕಂಡು 46.55/56 ರೂಪಾಯಿಗಳಿಗೆ ತಲುಪಿತ್ತು.ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಇಳಿಕೆ ಕಂಡು 46.62 ರೂಪಾಯಿಗಳಿಗೆ ತಲುಪಿದೆ.
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಚೇತರಿಕೆಯಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿಯಲು ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 76.18 ಪಾಯಿಂಟ್‌ಗಳಿಗೆ ಇಳಿಕೆಯಾಗಿ 18,378.76 ಅಂಕಗಳಿಗೆ ತಲುಪಿದೆ.