ಕಳೆದ ಮೂರು ವರ್ಷಗಳ ಅವಧಿಯಲ್ಲಿ ಉತ್ಪಾದನಾ ವೆಚ್ಚ ಹೆಚ್ಚಳದಿಂದಾಗಿ, ಮೆಟ್ರೋ ನಗರಗಳ ಹಾಲಿನ ದರದಲ್ಲಿ ಪ್ರತಿ ಲೀಟರ್‌ಗೆ 7 ರೂಪಾಯಿ ಏರಿಕೆಯಾಗಿದೆ ಎಂದು ಸಂಸತ್ತಿಗೆ ಮಾಹಿತಿ ನೀಡಲಾಗಿದೆ.
ಜುಲೈ 2007ರ ನಂತರ ಮುಂಬೈಯಲ್ಲಿ ಹಾಲಿನ ದರದಲ್ಲಿ 7 ರೂಪಾಯಿ ಏರಿಕೆಯಾಗಿ 24 ರೂಪಾಯಿಗಳಿಗೆ ತಲುಪಿದೆ ಎಂದು ಆಹಾರ ಮತ್ತು ನಾಗರಿಕ ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವ ಕೆ.ವಿ.ಥಾಮಸ್ ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಹಾಲಿನ ದರ ಪ್ರತೀ ಲೀಟರ್‌ಗೆ 6 ರೂಪಾಯಿಗಳಷ್ಟು ಏರಿಕೆಯಾಗಿ 24 ರೂಪಾಯಿಗಳಿಗೆ ತಲುಪಿದೆ. ಕೋಲ್ಕತಾ ಮತ್ತು ಚೆನ್ನೈ ನಗರಗಳಲ್ಲಿ ಪ್ರತಿ ಲೀಟರ್‌ಗೆ 4 ರೂಪಾಯಿಗಳಷ್ಟು ಏರಿಕೆಯಾಗಿದೆ ಎಂದು ಸಚಿವ ಥಾಮಸ್ ಹೇಳಿದ್ದಾರೆ.
ಕಳೆದ ಒಂದು ವರ್ಷದ ಆವಧಿಯಲ್ಲಿ ಹಾಲಿನ ಸಗಟು ಸೂಚ್ಯಂಕ ದರ ಶೇ.19.03ರಷ್ಟು ಏರಿಕೆಯಾಗಿದೆ. ಉತ್ಪಾದನಾ ವೆಚ್ಚ ಹೆಚ್ಚಳದಿಂದಾಗಿ, ಹಾಲಿನ ದರದಲ್ಲಿ ಏರಿಕೆಯಾಗಿದೆ ಎಂದು ಸಚಿವ ಥಾಮಸ್ ತಿಳಿಸಿದ್ದಾರೆ.