ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ವರ್ಷಾಂತ್ಯಕ್ಕೆ 10 ಸಾವಿರ ಕೋಟಿ ನಿವ್ವಳ ಲಾಭದ ಗುರಿ:ಎಸ್‌ಬಿಐ (Sbi profits | Indian banking industry)
Bookmark and Share Feedback Print
 
ಸರಕಾರಿ ಸ್ವಾಮ್ಯದ ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾ ಮೊದಲ ತ್ರೈಮಾಸಿಕ ಫಲಿತಾಂಶದಿಂದ ಉತ್ತೇಜಿತಗೊಂಡಿದ್ದು, ಆರ್ಥಿಕ ವರ್ಷಾಂತ್ಯಕ್ಕೆ 10 ಸಾವಿರ ಕೋಟಿ ರೂಪಾಯಿ ನಿವ್ವಳ ಲಾಭದ ಗುರಿಯನ್ನು ಹೊಂದಿದೆ ಎಂದು ಬ್ಯಾಂಕ್ ಮುಖ್ಯಸ್ಥ ಒ.ಪಿ.ಭಟ್ ತಿಳಿಸಿದ್ದಾರೆ.

ಕಳೆದ ಆರ್ಥಿಕ ವರ್ಷಾಂತ್ಯಕ್ಕೆ 9,166.05 ಕೋಟಿ ರೂಪಾಯಿಗಳ ನಿವ್ವಳ ಲಾಭವಾಗಿತ್ತು. ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಿವ್ವಳ ಲಾಭ 10 ಸಾವಿರ ಕೋಟಿಗೆ ಮೀರುವ ಸಾಧ್ಯತೆಗಳಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾ, ಸಾಲ ಮರುಪಾವತಿ ಕೊರತೆಯ ಮಧ್ಯೆಯು ಆರಂಭಿಕ ತ್ರೈಮಾಸಿಕ ಅವಧಿಯಲ್ಲಿ ಶೇ.25ರಷ್ಟು ನಿವ್ವಳ ಲಾಭ ದಾಖಲಿಸಿ 2,914.20 ಕೋಟಿ ರೂಪಾಯಿಗಳಿಗೆ ತಲುಪಿದೆ.

ಮೊದಲ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಬಡ್ಡಿ ಆದಾಯ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ.45.35ರಷ್ಟು ಏರಿಕೆಯಾಗಿದೆ. ಬ್ಯಾಂಕ್‌ನ ಒಟ್ಟು ಆದಾಯ 85,962.07 ಕೋಟಿ ರೂಪಾಯಿಗಳಿಗೆ ತಲುಪಿದೆ. 2008-09ರ ಅವಧಿಯಲ್ಲಿ ಬ್ಯಾಂಕ್‌ನ ಒಟ್ಟು ಆದಾಯ 76,479.2ರಷ್ಟಾಗಿತ್ತು ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಆರ್ಥಿಕ ವರ್ಷಾಂತ್ಯಕ್ಕೆ ಶೇ.20ರಷ್ಟು ನಿವ್ವಳ ಲಾಭದ ಗುರಿಯನ್ನು ಹೊಂದಿದೆ. ಸಾಲದ ಮೇಲಿನ ಬಡ್ಡಿ ದರದಲ್ಲಿ 150 ಬೇಸಿಸ್ ಪಾಯಿಂಟ್‌ಗಳ ಹೆಚ್ಚಳ ಘೋಷಣೆ ಇಂದಿನಿಂದ ಜಾರಿಗೆ ಬಂದಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ