ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 15 ಸಾವಿರ ಕೋಟಿ ಗುರಿ ತಲುಪಿದ ರಿಲಯನ್ಸ್ ಲೈಫ್ (Anil Ambani Group | Reliance Life | AUM | Fiscal)
Bookmark and Share Feedback Print
 
ಅನಿಲ್ ಅಂಬಾನಿ ಸಂಚಾಲಿತ ರಿಲಯನ್ಸ್ ಲೈಫ್ ಇನ್‌ಶ್ಯೂರೆನ್ಸ್, 15,000 ಕೋಟಿ ರೂಪಾಯಿ ಆಸ್ತಿಯನ್ನು ಹೊಂದಿದ್ದು, ವರ್ಷಾಂತ್ಯದವರೆಗೆ ದ್ವಿಗುಣಗೊಳ್ಳುವ ಸಾಧ್ಯತೆಗಳಿವೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 2009ರ ಅವಧಿಯಲ್ಲಿ ರಿಲಯನ್ಸ್ ಲೈಫ್ ಇನ್‌ಶ್ಯೂರೆನ್ಸ್ ಸಂಸ್ಥೆಯ ಸ್ವತ್ತು 10,000 ಕೋಟಿ ರೂಪಾಯಿಗಳಿಗೆ ತಲುಪಿತ್ತು ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಬರುವ 2011-12ರ ಅವಧಿಗೆ ಆರ್ಥಿಕ ಸಂಗ್ರಹ, 30,000 ಕೋಟಿ ರೂಪಾಯಿಗಳ ಗುರಿಯನ್ನು ಕಂಪೆನಿ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ಖಾಸಗಿ ವಿಮಾ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿರುವ ರಿಲಯನ್ಸ್ ಲೈಫ್ ಇನ್‌ಶ್ಯೂರೆನ್ಸ್, ಕೇವಲ ಐದು ವರ್ಷಗಳ ಅವಧಿಯಲ್ಲಿ ತನ್ನ ಗುರಿಯನ್ನು ಸಾಧಿಸಿದೆ ಎಂದು ಕಂಪೆನಿಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೆಶಕ ಮಲಯ್ ಘೋಷ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ