ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 3 ಪೈಸೆ ಏರಿಕೆ ಕಂಡು 46.64/65 ರೂಪಾಯಿಗಳಿಗೆ ಮುಕ್ತಾಯವಾಗಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ.
ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ. ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಾಗಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಇಳಿಕೆಯಾಗಲು ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.