ಬ್ಯಾಂಕ್‌ಗಳಿಂದ ಡಾಲರ್ ಮಾರಾಟದಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಏರಿಕೆಯಾಗಿ 46.86 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ನಿಧಾನಗತಿಯ ವಹಿವಾಟು ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ ರೂಪಾಯಿ ಮೌಲ್ಯದ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ಬಂಡವಾಳದ ಹೊರಹರಿವು ಹಾಗೂ ಏಷ್ಯಾದ ಕರೆನ್ಸಿಗಳ ದುರ್ಬಲ ವಹಿವಾಟಿನಿಂದಾಗಿ, ರೂಪಾಯಿ ಮತ್ತಷ್ಟು ಚೇತರಿಕೆಯಾಗಲು ತಡೆಯೊಡ್ಡಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.
ಫಾರೆಕ್ಸ್ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 26 ಪೈಸೆ ಇಳಿಕೆ ಕಂಡು 46.90/91 ರೂಪಾಯಿಗಳಿಗೆ ತಲುಪಿತ್ತು.ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಏರಿಕೆಯಾಗಿ 46.86 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 39.33 ಪಾಯಿಂಟ್‌ಗಳ ಏರಿಕೆ ಕಂಡು 18,272.26 ಅಂಕಗಳಿಗೆ ತಲುಪಿದೆ.