ಜಾಗತಿಕ ಆರ್ಥಿಕತೆ ಸಂಪೂರ್ಣವಾಗಿ ಸುಸ್ಥಿತಿಗೆ ಮರಳಿದ್ದರಿಂದ, ಕಳೆದ ಜುಲೈ ತಿಂಗಳ ಅವಧಿಯಲ್ಲಿ ವಿಮಾನ ಅಂತಾರಾಷ್ಟ್ರೀಯ ಸರಕು ಸಾಗಣೆಯಲ್ಲಿ ನಿಧಾನವಾಗಿ ಚೇತರಿಕೆ ಕಾಣುತ್ತಿದೆ ಎಂದು ಮೂಲಗಳು ತಿಳಿಸಿವೆ.
ಅಂತಾರಾಷ್ಟ್ರೀಯ ಸರಕು ಸಾಗಾಣೆಯಲ್ಲಿ ಶೇ.22.7ರಷ್ಟು ಏರಿಕೆಯಾಗಿದ್ದು, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.9.2ರಷ್ಟು ಚೇತರಿಕೆಯಾಗಿದೆ ಎಂದು ಐಎಟಿಎ ಅಧಿಕಾರಿಗಳು ತಿಳಿಸಿದ್ದಾರೆ.
ವೈಮಾನಿಕ ಕ್ಷೇತ್ರದಲ್ಲಿ ಪ್ರಯಾಣಿಕರ ಹಾಗೂ ಸರಕು ಸಾಗಾಣೆಯಲ್ಲಿ ನಿರೀಕ್ಷೆಗಿಂತ ವೇಗವಾಗಿ ಸಾಗುತ್ತಿದೆ. ಆದರೆ ವರ್ಷಾಂತ್ಯಕ್ಕೆ ನಿಧಾನಗತಿಯಾಗುವ ಸಾಧ್ಯತೆಗಳಿವೆ ಎಂದು ಐಎಟಿಎ ಪ್ರಧಾನ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿಯೊವನ್ನಿ ಬಿಸಿಗ್ನಿನಾನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಎಟಿಎ ಸಂಘಟನೆ 240 ಏರ್‌ಲೈನ್‌ಗಳನ್ನು ಪ್ರತಿನಿಧಿಸುತ್ತಿದ್ದು, ವೈಮಾನಿಕ ಕ್ಷೇತ್ರದಲ್ಲಿ ಶೇ.94ರಷ್ಟು ಪಾಲನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ.