ದೇಶದ ದ್ವಿಚಕ್ರ ವಾಹನ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಟಿವಿಎಸ್ ಮೋಟಾರ್,ಪ್ರಸ್ತುತವಿರುವ 2.1 ಮಿಲಿಯನ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು 2.8 ಮಿಲಿಯನ್‌ಗೆ ಹೆಚ್ಚಿಸಲು 2 ಬಿಲಿಯನ್ ರೂಪಾಯಿಗಳನ್ನು ಹೂಡಿಕೆ ಮಾಡಲು ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂಪೆನಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬರುವ ವರ್ಷದ ಏಪ್ರಿಲ್ ತಿಂಗಳಿನಿಂದ ಉತ್ಪಾದನಾ ಸಾಮರ್ಥ್ಯದಲ್ಲಿ ಹೆಚ್ಚಳವಾಗಲಿದೆ ಎಂದು ಟಿವಿಎಸ್ ಮೋಟಾರ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ವೇಣು ಶ್ರೀನಿವಾಸನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಚೆನ್ನೈ ಮೂಲದ ಟಿವಿಎಸ್ ಕಂಪೆನಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ 250,000 ವಾಹನಗಳನ್ನು ರಫ್ತು ಮಾಡಲು ನಿರ್ಧರಿಸಲಾಗಿದ್ದು, ವರ್ಷಾಂತ್ಯಕ್ಕೆ 2 ಮಿಲಿಯನ್ ವಾಹನಗಳ ಮಾರಾಟವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
ವಾಹನೋದ್ಯಮ ಸಂಸ್ಥೆ ಟಿವಿಎಸ್, ಸ್ಕೂಟರ್, ದ್ವಿಚಕ್ರ ವಾಹನಗಳು ಮತ್ತು ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿದೆ.