ದೇಶದ ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಸಂಚಾಲಿತ ದಾದ್ರಿ ವಿದ್ಯುತ್ ಘಟಕ ಸಂಪೂರ್ಣವಾಗಿ ಸಿದ್ಧಗೊಂಡು ಇಂಧನ ಬಳಸುವ ಹಂತದಲ್ಲಿ ಕೇಂದ್ರದಿಂದ ನೈಸರ್ಗಿಕ ಅನಿಲವನ್ನು ಪಡೆಯಬಹುದಾಗಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.
ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಜಿತಿನ್ ಪ್ರಸಾದ್ ಮಾತನಾಡಿ, ನೈಸರ್ಗಿಕ ಅನಿಲ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪ್ರಸ್ತುತವಿರುವ ವಿದ್ಯುತ್ ಘಟಕಗಳಿಗೆ ನೈಸರ್ಗಿಕ ಅನಿಲ ಸರಬರಾಜಿನ ನಂತರ, ಇತರ ಘಟಕಗಳಿಗೆ ಅನಿಲ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ದಾದ್ರಿ ವಿದ್ಯುತ್ ಘಟಕ ಸಂಪೂರ್ಣವಾಗಿ ಪೂರ್ಣಗೊಂಡ ನಂತರ, ನೈಸರ್ಗಿಕ ಅನಿಲ ಪೂರೈಕೆ ಮಾಡಲಾಗುವುದು ಎಂದು ಸಚಿವ ಪ್ರಸಾದ್ ಹೇಳಿದ್ದಾರೆ.
ಉತ್ತರ ಪ್ರದೇಶದ ದಾದ್ರಿ ಘಟಕದಲ್ಲಿ 7480 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುವುದು ಎಂದು ಉದ್ಯಮಿ ಅನಿಲ್ ಅಂಬಾನಿ ತಿಳಿಸಿದ್ದಾರೆ.