ಸತ್ಯಂ ಕಂಪ್ಯೂಟರ್‌ನ ಬಹುಕೋಟಿ ಹಗರಣದ ರೂವಾರಿ ಬಿ.ರಾಮಲಿಂಗಾರಾಜು, ಉಚ್ಚ ನ್ಯಾಯಾಲಯ ಜಾಮೀನು ನೀಡಿದ ನಂತರ ಎರಡನೇ ಬಾರಿಗೆ ಸ್ಥಳೀಯ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ರಾಜು, ತಮ್ಮ ವೈದ್ಯರೊಂದಿಗೆ ಹೈಕೋರ್ಟ್ ಆದೇಶದ ಮೇರೆಗೆ ವಿತಾರಣೆ ನಡೆಸುತ್ತಿರುವ 21ನೇ ಹೆಚ್ಚುವರಿ ನ್ಯಾಯಾಧೀಶರ ಮುಂದೆ ಹಾಜರಾದರು ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.
ನ್ಯಾಯಾಲಯದಲ್ಲಿ ಸುಮಾರು ಐದು ನಿಮಿಷಗಳ ಕಾಲ ಕಳೆದ ನಂತರ, ನ್ಯಾಯಾಧೀಶ ಬಿವಿಎಲ್‌ಎನ್ ಚಕ್ರವರ್ತಿ ಅವರ ಅನುಮತಿ ಪಡೆದು ನ್ಯಾಯಾಲಯದಿಂದ ನಿರ್ಗಮಿಸಿದರು ಎಂದು ಮೂಲಗಳು ತಿಳಿಸಿವೆ.
ಸತ್ಯಂ ಬಹುಕೋಟಿ ಹಗರಣದಲ್ಲಿ ಭಾಗಿಯಾದ 10 ಆರೋಪಿಗಳ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್ ತಿಂಗಳಿನಿಂದ ರಾಜು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
ಸತ್ಯಂ ಕಂಪ್ಯೂಟರ್‌ನ ಮಾಜಿ ಮುಖ್ಯಸ್ಥ ಬಿ.ರಾಮಲಿಂಗಾರಾಜು, ಕಳೆದ ಜನೆವರಿ ತಿಂಗಳ ಅವಧಿಯಲ್ಲಿ ಬಂಧನಕ್ಕೊಳಗಾಗಿದ್ದರು. ಕಳೆದ ವಾರವಷ್ಟೆ ಆಂಧ್ರಪ್ರದೇಶದ ಉಚ್ಚ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿತ್ತು.