ಮಾಸಾಂತ್ಯದಿಂದಾಗಿ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಏರಿಕೆಯಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 2ಪೈಸೆ ಕುಸಿತವಾಗಿ 46.86 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ದುರ್ಬಲವಾಗಿದ್ದರಿಂದ, ರೂಪಾಯಿ ಮೌಲ್ಯದ ಮತ್ತಷ್ಟು ಇಳಿಕೆಗೆ ಅಡ್ಡಿಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 6 ಪೈಸೆ ಕುಸಿತ ಕಂಡು 46.84/85 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 2ಪೈಸೆ ಕುಸಿತವಾಗಿ 46.86 ರೂಪಾಯಿಗಳಿಗೆ ತಲುಪಿದೆ.
ತಿಂಗಳಾಂತ್ಯದ ಅವಧಿಯಿಂದಾಗಿ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 65.53 ಪಾಯಿಂಟ್‌ಗಳ ಏರಿಕೆ ಕಂಡು 18,160.82 ಅಂಕಗಳಿಗೆ ತಲುಪಿದೆ.