ಪ್ರವಾಸಿಗರಿಕೆ ಕಹಿ ಸುದ್ದಿಯೊಂದು ಬಹಿರಂಗವಾಗಿದೆ.ಮುಂಬರುವ ಸೆಪ್ಟೆಂಬರ್ ತಿಂಗಳಿನಿಂದ ಹೋಟೆಲ್ ಕೋಣೆಗಳ ದರಗಳಲ್ಲಿ ಶೇ.10-15ರಷ್ಟು ಬಾಡಿಗೆ ದರಗಳನ್ನು ಹೆಚ್ಚಿಸಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚಳಿಗಾಲದ ಸಮಯದಲ್ಲಿ ಹೆಚ್ಚಿನ ಪ್ರವಾಸಿಗರು ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ,ಹೋಟೆಲ್ ಕೋಣೆಗಳ ದರಗಳಲ್ಲಿ ಶೇ.10ರಿಂದ 15ರಷ್ಟು ಏರಿಕೆ ಮಾಡುವ ನಿರೀಕ್ಷೆಗಳಿವೆ ಎಂದು ಉದ್ಯಮದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಏತನ್ಮಧ್ಯೆ, ನವದೆಹಲಿಯಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಪಂದ್ಯಾವಳಿಗಳು ನಡೆಯುವ ಸಂದರ್ಭದಲ್ಲಿ,ಹೋಟೆಲ್‌ಗಳಫ ದರಗಳಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕಳೆದ ವರ್ಷ ಮುಂಬೈಯಲ್ಲಿ ನಡೆದ ಉಗ್ರರ ದಾಳಿಯ ನಂತರ ಪ್ರವಾಸಿಗರ ಕೊರತೆಯಿಂದಾಗಿ ಹೋಟೆಲ್ ಮಾಲೀಕರು, ಕೋಣೆಗಳ ದರಗಳಲ್ಲಿ ಶೇ.25-30ರಷ್ಟು ದರ ಇಳಿಕೆ ಘೋಷಿಸಿದ ಹಿನ್ನೆಲೆಯಲ್ಲಿ ನಷ್ಟ ಅನುಭವಿಸಬೇಕಾಯಿತು ಎಂದು ಒಬೆರಾಯ್ ಗ್ರೂಪ್‌ನ ವ್ಯವಸ್ಥಾಪಕರು ತಿಳಿಸಿದ್ದಾರೆ.