ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ದೀಪಾವಳಿಯಲ್ಲಿ ಚಿನ್ನದ ದರ ಪ್ರತಿ 10ಗ್ರಾಂಗೆ 20 ಸಾವಿರ ರೂ? (Silver | Gold | Diwali | Bullion)
Bookmark and Share Feedback Print
 
PTI
ಹೂಡಿಕೆದಾರರಿಂದ ಸುರಕ್ಷಿತ ಠೇವಣಿಯಾದ ಚಿನ್ನದ ಖರೀದಿಯಲ್ಲಿ ಏರಿಕೆಯಾಗಿದ್ದರಿಂದ, ಮುಂಬರುವ ದೀಪಾವಳಿಯವರೆಗೆ ಚಿನ್ನದ ದರ ಪ್ರತಿ 10ಗ್ರಾಂಗೆ 19,500-20,000 ರೂಪಾಯಿಗಳಿಗೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಮುಂಬರುವ ದೀಪಾವಳಿಯವರೆಗೆ ಚಿನ್ನದ ದರ ಪ್ರತಿ 10ಗ್ರಾಂಗೆ 19,500-Rs 20,000 ರೂಪಾಯಿಗಳಿಗೆ ತಲುಪುವ ನಿರೀಕ್ಷೆಗಳಿವೆ ಎಂದು ಮುಂಬೈ ಚಿನಿವಾರಪೇಟೆಯ ಅಧ್ಯಕ್ಷ ಸುರೇಶ್ ಹುಂಡಿಯಾ ಹೇಳಿದ್ದಾರೆ.

ಸ್ಟ್ಯಾಂಡರ್ಡ್ ಚಿನ್ನದ ದರ, ಕಳೆದ ವಾರದ ಅಂತ್ಯಕ್ಕೆ ಮುಂಬೈ ಮಾರುಕಟ್ಟೆಯಲ್ಲಿ ಪ್ರತಿ 10ಗ್ರಾಂ ಚಿನ್ನದ ದರ 18,910 ರೂಪಾಯಿಗಳಿಗೆ ತಲುಪಿತ್ತು.

ನ್ಯೂಯಾರ್ಕ್ ಮಾರುಕಟ್ಟೆಯಲ್ಲಿ ಚಿನ್ನದ ದರ ಪ್ರತಿ ಔನ್ಸ್‌ಗೆ 1,237.90 ಡಾಲರ್‌ಗಳಿಗೆ ತಲುಪಿದೆ.

ಜಾಗತಿಕ ಶೇರುಪೇಟೆಗಳ ತೊಳಲಾಟ, ಕರೆನ್ಸಿ ಮೌಲ್ಯ ಕುಸಿತ ಹಾಗೂ ಹಣದುಬ್ಬ ದರದ ಕಳವಳದಿಂದಾಗಿ, ಹೂಡಿಕೆದಾರರು ಚಿನ್ನದ ಖರೀದಿಯಲ್ಲಿ ತೊಡಗಿದ್ದರಿಂದ, ವರ್ಷಾಂತ್ಯಕ್ಕೆ ಸಾಗರೋತ್ತರ ಮಾರುಕಟ್ಟೆಯಲ್ಲಿ ಚಿನ್ನದ ದರ 1,350 ಡಾಲರ್‌ಗಳಿಗೆ ತಲುಪುವ ಸಾಧ್ಯತೆಗಳಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮುಂಬರುವ ದಿನಗಳಲ್ಲಿ ಗಣೇಶ ಚತುರ್ಥಿ, ದಸರಾ ಮತ್ತು ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ಚಿನ್ನಾಭರಣಗಳ ಬೇಡಿಕೆ ಹೆಚ್ಚಳದಿಂದಾಗಿ ಚಿನ್ನದ ದರ ಮತ್ತಷ್ಟು ಏರಿಕೆ ಕಾಣುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ