ಸಾಗರೋತ್ತರ ಮಾರುಕಟ್ಟೆಗಳಲ್ಲಿ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಚೇತರಿಕೆ ಕಂಡಿದ್ದರಿಂದ, ಇಂದಿನ ಆರಂಭಿಕ ವಹಿವಾಟಿನಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 10 ಪೈಸೆ ಕುಸಿತವಾಗಿ 47.01 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 2 ಪೈಸೆ ಇಳಿಕೆಯಾಗಿ 46.91/92 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 10 ಪೈಸೆ ಕುಸಿತವಾಗಿ 47.01 ರೂಪಾಯಿಗಳಿಗೆ ತಲುಪಿದೆ.
ಏಷ್ಯಾದ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಚೇತರಿಕೆ ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ 68.58 ಪಾಯಿಂಟ್‌ಗಳ ಇಳಿಕೆ ಕಂಡು 17,963.53 ಅಂಕಗಳಿಗೆ ತಲುಪಿದೆ.