ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಜಮ್ಮು: ಪ್ರತಿಭಟನೆಗಳಿಂದಾಗಿ 21,000 ಕೋಟಿ ರೂ, ನಷ್ಟ (Jammu | Kashmir | Economy | Dent | Tourism | Industries)
Bookmark and Share Feedback Print
 
ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕತವಾದಿ ಪ್ರಾಯೋಜಕತ್ವ ಪ್ರತಿಭಟನೆಗಳಿಂದಾಗಿ ಸುಮಾರು 80 ದಿನಗಳ ಬಂದ್ ಘೋಷಣೆಯಿಂದಾಗಿ ಕೈಗಾರಿಕೋದ್ಯಮ, ಪ್ರವಾಸೋದ್ಯಮ ಮತ್ತು ಕರಕುಶಲ ಕೈಗಾರಿಕೆಗಳು ಕನಿಷ್ಠ 21,000 ಕೋಟಿ ರೂಪಾಯಿ ನಷ್ಟ ಅನಭವಿಸಿವೆ ಎಂದು ಮೂಲಗಳು ತಿಳಿಸಿವೆ.

ಕಣಿವೆಯಲ್ಲಿರುವ ದೀರ್ಘಾವಧಿಯ ಪ್ರತಿಭಟನೆಗಳು ಅಂತ್ಯಗೊಳ್ಳುವ ಲಕ್ಷಣಗಳು ಕಂಡುಬರುತ್ತಿಲ್ಲ.ರಾಜ್ಯದಲ್ಲಿರುವ ಕೈಗಾರಿಕೋದ್ಯಮಗಳು ಹೋಟೆಲ್‌ಗಳು ಹಾಗೂ ರೆಸ್ಟುರಾಂಟ್‌ಗಳು ಭಾರಿ ನಷ್ಟವನ್ನು ಎದುರಿಸುತ್ತಿವೆ ಎಂದು ವಾಣಿಜ್ಯ ಇಲಾಖೆಯ ಮೂಲಗಳು ತಿಳಿಸಿವೆ.

ವಹಿವಾಟು ಕುಸಿತದಿಂದಾಗಿ ಹೋಟೆಲ್, ರೆಸ್ಟುರಾಂಟ್ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಆದರೆ, ವಜಾಗೊಂಡ ಉದ್ಯೋಗಿಗಳ ನಿಖರ ಸಂಖ್ಯೆಯ ಬಗ್ಗೆ ಮಾಹಿತಿಯಿಲ್ಲ ಎಂದು ಚೇಂಬರ್ ಆಫ್ ಕಾಮರ್ಸ್ ಅದ್ಯಕ್ಷ ನಾಜೀರ್ ಅಹ್ಮದ್ ದಾರ್ ತಿಳಿಸಿದ್ದಾರೆ.

ಚಳಿಗಾಲದಲ್ಲಿ ಪ್ರವಾಸಿಗಳ ಸಂಖ್ಯೆ ಇಳಿಮುಖವಾಗುವುದರಿಂದ, ಸರ್ವೆ ಸಾಮಾನ್ಯವಾಗಿ ಹೋಟೆಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸಲಾಗುತ್ತದೆ. ಆದರೆ, ಪ್ರಸಕ್ತ ಸಂದರ್ಭದಲ್ಲಿ ಸೀಜನ್‌ ಅವಧಿಯಲ್ಲಿ ಹೆಚ್ಚಿನ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ ಎಂದು ದಾರ್ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ