ವಿದೇಶಿ ಬಂಡವಾಳದ ಒಳಹರಿವು ಹಾಗೂ ಡಾಲರ್ ಎದುರಿಗೆ ಇತರ ಕರೆನ್ಸಿಗಳ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಏರಿಕೆಯಾಗಿ 46.53 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 8 ಪೈಸೆ ಏರಿಕೆ ಕಂಡು 46.64/65 ರೂಪಾಯಿಗಳಿಗೆ ಮುಕ್ತಾಯವಾಗಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಏರಿಕೆಯಾಗಿ 46.53 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ಬಂಡವಾಳದ ಒಳಹರಿವು ಹಾಗೂ ಡಾಲರ್ ಎದುರಿಗೆ ಇತರ ಕರೆನ್ಸಿಗಳ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ. 0.80ರಷ್ಟು ಏರಿಕೆ ಕಂಡು 18,367.77 ಅಂಕಗಳಿಗೆ ತಲುಪಿದೆ.