ದೇಶದ ಕಾರು ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಜಪಾನ್ ಮೂಲದ ಸುಝುಕಿ ಮೋಟಾರ್ ಕಾರ್ಪೋರೇಶನ್, ವಾರ್ಷಿಕವಾಗಿ 250,000 ಕಾರುಗಳ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿರುವ ನೂತನ ಘಟಕವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಮುಂಬರುವ 2013ರ ವೇಳೆಗೆ ನೂತನ ಘಟಕ ಕಾರ್ಯಾರಂಭ ಮಾಡುವ ವಿಶ್ವಾಸವಿದೆ ಎಂದು ಕಂಪೆನಿಯ ವ್ಯವಸ್ಥಾಪಕರು ತಿಳಿಸಿದ್ದಾರೆ.
1983ರಲ್ಲಿ ಭಾರತದ ವಾಹನೋದ್ಯಮ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ಮಾರುತಿ ಸುಝುಕಿ, 2012ರ ವೇಳೆಗೆ 1.45 ಮಿಲಿಯನ್ ಕಾರುಗಳ ಉತ್ಪಾದನೆ ಸಾಮರ್ಥ್ಯವನ್ನು ಹೆಚ್ಚಿಸಲು ಕಂಪೆನಿ ಯೋಜನೆಗಳನ್ನು ರೂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶ್ವ ವಾಹನೋದ್ಯಮ ಮಾರುಕಟ್ಟೆಯಲ್ಲಿ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ಭಾರತದಲ್ಲಿ, ಮಾರುತಿ ಸುಝುಕಿ ಸಂಸ್ಥೆ ವಾಹನೋದ್ಯಮ ಕ್ಷೇತ್ರದಲ್ಲಿ ಶೇ.50ರಷ್ಟು ಪಾಲನ್ನು ಹೊಂದಿದೆ.