ಇತರ ಪ್ರಮುಖ ಕರೆನ್ಸಿಗಳ ಎದುರು ಡಾಲರ್ ಚೇತರಿಕೆ ಕಂಡಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಏರಿಕೆಯಾಗಿ 46.59 ರೂಪಾಯಿಗಳಿಗೆ ತಲುಪಿದೆ.
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಚೇತರಿಕೆಯಾಗಿದ್ದರಿಂದ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ವಿದೇಶಿ ಬಂಡವಾಳದ ಒಳಹರಿವು ನಿರಂತರ ಹೆಚ್ಚಳವಾದ ಹಿನ್ನೆಲೆಯಲ್ಲಿ, ರೂಪಾಯಿ ಮೌಲ್ಯದಲ್ಲಿ ಮತ್ತಷ್ಟು ಕುಸಿತವಾಗುವುದನ್ನು ತಡೆದಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 10 ಪೈಸೆ ಏರಿಕೆಯಾಗಿ 46.54/55 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಏರಿಕೆಯಾಗಿ 46.59 ರೂಪಾಯಿಗಳಿಗೆ ತಲುಪಿದೆ.