ವಾಷಿಂಗ್ಟನ್, ಮಂಗಳವಾರ, 7 ಸೆಪ್ಟೆಂಬರ್ 2010( 13:36 IST )
ಅಮೆರಿಕದ ಆರ್ಥಿಕತೆಯಲ್ಲಿ ಚೇತರಿಕೆ ಕಂಡಿದ್ದರಿಂದ ರಸ್ತೆ, ರೈಲ್ವೆ ಮತ್ತು ವಿಮಾನನಿಲ್ದಾಣ ಸೇರಿದಂತೆ ಮೂಲಸೌಕರ್ಯ ಕ್ಷೇತ್ರಗಳಿಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ 50 ಬಿಲಿಯನ್ ಡಾಲರ್ ವೆಚ್ಚ ಮಾಡಲಾಗುವದು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.
ನವೆಂಬರ್ ಮಧ್ಯಭಾಗದಲ್ಲಿ ಚುನಾವಣೆಗಳು ನಡೆಯಲಿದ್ದು, ಡೆಮಾಕ್ರೆಟಿಕ್ ಪಕ್ಷಕ್ಕೆ ಹೆಚ್ಚಿನ ಹಾನಿಯಾಗುವ ಸಾಧ್ಯತೆಗಳಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಒಬಾಮಾ, ನೂತನ ಆರ್ಥಿಕ ಹೂಡಿಕೆಗಳ ಯೋಜನೆಗಳನ್ನು ಪ್ರಕಟಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾರ್ಮಿಕರ ದಿನದಂದು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತಿದ್ದು, ಅಧ್ಯಕ್ಷ ಬರಾಕ್ ಒಬಾಮಾ ಬಿಕ್ಕಟ್ಟು ಎದುರಿಸುತ್ತಿರುವ ರಾಜ್ಯವಾದ ಒಹಿಯೊಗೆ ಭೇಟಿ ನೀಡಲಿದ್ದು, ರಾಜಕೀಯ ಸಮಸ್ಯೆಗಳ ಪರಿಹಾರಕ್ಕಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.