ದನದ ಮಾಂಸದ ದರದಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದನದ ಮಾಂಸ ರಫ್ತಿಗೆ ನಿಷೇಧ ಹೇರಬೇಕು ಎಂದು ಕೇಂದ್ರದ ಕಲ್ಲಿದ್ದಲು ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಸರಕಾರಕ್ಕೆ ಮನವಿ ಮಾಡಿದ್ದಾರೆ.
ದನದ ಮಾಂಸ ರಫ್ತಿಗೆ ನಿಷೇಧ ಕುರಿತಂತೆ ಪ್ರಧಾನಿಯವರನ್ನು ಭೇಟಿ ಮಾಡಿ ಚರ್ಚಿಸಲಾಗಿದ್ದು,ಮಧ್ಯಪ್ರವೇಶಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಲಾಗಿದೆ.ಬೃಹತ್ ಪ್ರಮಾಣದ ದನದ ಮಾಂಸವನ್ನು ರಫ್ತಾಗುತ್ತಿರುವ ಹಿನ್ನೆಲೆಯಲ್ಲಿ ದರ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ದನದ ಮಾಂಸ ಪ್ರತಿ ಕೆಜಿಗೆ 30 ರೂಪಾಯಿಗಳಿಂದ 100 ರೂಪಾಯಿಗಳಿಗೆ ಏರಿಕೆಯಾಗಿದೆ.ದರ ಏರಿಕೆಯಿಂದಾಗಿ ಜನಸಾಮಾನ್ಯರು ದನದ ಮಾಂಸದಿಂದ ದೂರವಿರುವಂತಾಗಿದೆ ಎಂದು ಸಚಿವ ಜೈಸ್ವಾಲ್ ತಿಳಿಸಿದ್ದಾರೆ.