ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Rupee | Dollar | Foreign Exchange | Capital inflows)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ನಿರಂತರವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಏರಿಕೆಯಾಗಿ 46.51 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಒಳಹರಿವು ನಿರಂತರ ಹೆಚ್ಚಳ ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ರೂಪಾಯಿ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 21 ಪೈಸೆ ಏರಿಕೆ ಕಂಡು 46.63/64 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಏರಿಕೆಯಾಗಿ 46.51 ರೂಪಾಯಿಗಳಿಗೆ ತಲುಪಿದೆ.

ಮುಂಬೈ ಶೇರುಪೇಟೆಯ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 100.39 ಪಾಯಿಂಟ್‌ಗಳ ಏರಿಕೆ ಕಂಡು 18,767.10 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಫಾರೆಕ್ಸ್