ದೇಶದಲ್ಲಿ ಸಿಮೆಂಟ್ ತಯಾರಿಕೆ ಕಂಪೆನಿಗಳಲ್ಲಿ ಮುಂಚೂಣಿಯಲ್ಲಿರುವ ಜೆಕೆ ಸಿಮೆಂಟ್, ಮುಂಬರುವ ದಿನಗಳಲ್ಲಿ ಸಿಮೆಂಟ್ ದರಗಳಲ್ಲಿ ಶೇ.10-15ರಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿಕೆ ನೀಡಿದೆ.
ಕಂಪೆನಿ, ಮುಂದಿನ ವರ್ಷದ ಅವಧಿಯಲ್ಲಿ ವಾರ್ಷಿಕ ಉತ್ಪಾದನಾ ಸಾಮರ್ಥ್ಯವನ್ನು 2-3 ಮಿಲಿಯನ್ ಟನ್‌ಗಳಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಪ್ರಸಕ್ತ ವರ್ಷದ ಅವಧಿಯಲ್ಲಿ 1,500 ಕೋಟಿ ರೂಪಾಯಿ ಹೂಡಿಕೆ ಮಾಡಲಾಗುವುದು ಎಂದು ಜೆಕೆ ಸಿಮೆಂಟ್ಸ್ ವಕ್ತಾರರು ತಿಳಿಸಿದ್ದಾರೆ.
ಮುಂಗಾರಿನ ನಂತರ ಸಿಮೆಂಟ್ ದರದಲ್ಲಿ ಶೇ.10-15ರಷ್ಟು ಹೆಚ್ಚಳವಾಗುವ ನಿರೀಕ್ಷೆಗಳಿವೆ ಎಂದು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಯಡುಪತಿ ಸಿಂಘಾನಿಯಾ ಹೇಳಿದ್ದಾರೆ.
ಕಳೆದ ಆರ್ಥಿಕ ವರ್ಷದಲ್ಲಿ ಪ್ರತಿ ಬ್ಯಾಗ್‌ಗೆ 50 ರೂಪಾಯಿಗಳನ್ನು ಹೆಚ್ಚುವರಿಯಾಗಿ ಪಡೆಯಲಾಗುತ್ತಿದೆ. ಸಿಮೆಂಟ್ ಉತ್ಪಾದನೆಯಲ್ಲಿ ಹೆಚ್ಚಳ ಹಾಗೂ ಮುಂಗಾರಿನ ಹಿನ್ನೆಲೆಯಲ್ಲಿ ಕಡಿಮೆ ದರದಲ್ಲಿ ಸಿಮೆಂಟ್ ಮಾರಾಟವಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಸಿಮೆಂಟ್ ದರ ಉತ್ತರ ಭಾರತದಲ್ಲಿ ಪ್ರತಿ ಬ್ಯಾಗ್‌ಗೆ 220 ರೂಪಾಯಿಗಳಿಂದ 250 ರೂಪಾಯಿಗಳವರೆಗೆ ತಲುಪಿದೆ.ದಕ್ಷಿಣ ಭಾರತದಲ್ಲಿ ಪ್ರತಿ ಬ್ಯಾಗ್‌ಗೆ 200-220 ರೂಪಾಯಿಗಳ ದರವನ್ನು ನಿಗದಿಪಡಿಸಲಾಗಿದೆ ಎಂದು ಜೆಕೆ ಸಿಮೆಂಟ್ಸ್ ಅಧಿಕಾರಿಗಳು ತಿಳಿಸಿದ್ದಾರೆ.