ನಿರಂತರ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3 ಪೈಸೆ ಏರಿಕೆಯಾಗಿ 46.36 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಏರಿಕೆಯಾಗಿ 46.39/40 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3 ಪೈಸೆ ಏರಿಕೆಯಾಗಿ 46.36 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ,ರೂಪಾಯಿ ಮೌಲ್ಯದ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 87.34 ಪಾಯಿಂಟ್‌ಗಳ ಏರಿಕೆ ಕಂಡು 19,295.67 ಅಂಕಗಳಿಗೆ ತಲುಪಿದೆ.