ದೇಶದ ಕಾರು ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಫೋರ್ಡ್ ಇಂಡಿಯಾ, ಮುಂಬರುವ ಐದು ವರ್ಷಗಳ ಅವಧಿಯಲ್ಲಿ ಎಂಟು ಮಾಡೆಲ್ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ನಿರ್ಧರಿಸಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಮುಂಬರುವ ಅರ್ಧ ದಶಕದೊಳಗೆ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಎಂಟು ಮಾಡೆಲ್‌ಗಳ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗುವುದು ಎಂದು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಮಿಚೈಲ್ ಬೊನೆಹಾಮ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಳೆದ 2008ರ ಜನೆವರಿ ಅವಧಿಯಲ್ಲಿ ಚೆನ್ನೈನಲ್ಲಿರುವ ಘಟಕದಲ್ಲಿ ವಾರ್ಷಿಕವಾಗಿ 200,000 ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು 500 ಮಿಲಿಯನ್ ಡಾಲರ್ ಹೂಡಿಕೆ ಮಾಡಲಾಗಿತ್ತು.ಇದೀಗ 250,000 ವಾಹನಗಳ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಳಗೊಳಿಸಲು ಮತ್ತಷ್ಟು ಹೂಡಿಕೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ದೇಶದ ಕಾರು ಮಾರುಕಟ್ಟೆಯಲ್ಲಿ ಹೆಚ್ಚಿನ ಪಾಲು ಹೊಂದಲು ಕಂಪೆನಿ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು,ಹೂಡಿಕೆಯನ್ನು ಮುಂದುವರಿಸಲಿದೆ ಎಂದು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಮಿಚೈಲ್ ಬೊನೆಹಾಮ್ ಹೇಳಿದ್ದಾರೆ.