ವಿದೇಶಿ ವಿನಿಮಯ ಮಾರುಕಟ್ಟೆಯ ವಹಿವಾಟಿನ ಮುಕ್ತಾಯಕ್ಕೆ ರೂಪಾಯಿ ಎದುರಿಗೆ ಡಾಲರ್ ಮೌಲ್ಯದಲ್ಲಿ ಕುಸಿತ ಕಂಡು 46.35/36 ರೂಪಾಯಿಗಳಿಗೆ ತಲುಪಿದೆ.
ಆದರೆ, ಪೌಂಡ್ ದರದಲ್ಲಿ ಚೇತರಿಕೆಯಾಗಿ ಪ್ರತಿ ಪೌಂಡ್‌ಗೆ 72.09/11 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಫಾರೆಕ್ಸ್ ವಹಿವಾಟಿನ ಮುಕ್ತಾಯಕ್ಕೆ ಡಾಲರ್‌ಗೆ .46.37 ರೂಪಾಯಿ, ಪೌಂಡ್ ಸ್ಟೆರ್ಲಿಂಗ್ 72.09/11, ಯುರೋ 60.17 ಮತ್ತು ಜಪಾನ್‌ನ ಯೆನ್ 100 ರೂಪಾಯಿಗಳಿಗೆ ತಲುಪಿದೆ.
ಇಂದಿನ ಆರಂಭಿಕ ವಹಿವಾಟಿನಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಚೇತರಿಕೆ ಕಂಡು 46.38 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ, ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ರೂಪಾಯಿ ಮೌಲ್ಯದಲ್ಲಿ ಮತ್ತಷ್ಟು ಏರಿಕೆಯಾಗುವುದನ್ನು ತಡೆದಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 5 ಪೈಸೆ ಏರಿಕೆ ಕಂಡು 46.44/45 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಚೇತರಿಕೆ ಕಂಡು 46.38 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 138.57 ಪಾಯಿಂಟ್‌ಗಳ ಏರಿಕೆ ಕಂಡು 19,485.53 ಅಂಕಗಳಿಗೆ ತಲುಪಿದೆ.