ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಹಣದುಬ್ಬರ ನಿಯಂತ್ರಣಕ್ಕಾಗಿ ರೆಪೋ ದರಗಳಲ್ಲಿ ಹೆಚ್ಚಳ:ಆರ್‌ಬಿಐ (RBI | Interest rate | Inflation | Bankers | Liquidity)
Bookmark and Share Feedback Print
 
PTI
ಕೈಗಾರಿಕೋದ್ಯಮ ಚೇತರಿಕೆಯ ಸಂಕೇತಗಳು ನೀಡುತ್ತಿರುವ ಹಿನ್ನೆಲೆಯಲ್ಲಿ, ಹಣದುಬ್ಬರವನ್ನು ನಿಯಂತ್ರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಹೆಚ್ಚಳವನ್ನು ಘೋಷಿಸಿದೆ ಎಂದು ಆರ್‌ಬಿಐ ಮೂಲಗಳು ತಿಳಿಸಿವೆ.

ರಿಸರ್ವ್ ಬ್ಯಾಂಕ್, ರೆಪೋ ದರಗಳಲ್ಲಿ 25 ಬೇಸಿಸ್ ಪಾಯಿಂಟ್‌ಗಳನ್ನು ಹೆಚ್ಚಿಸಿ ಶೇ.6ಕ್ಕೆ ಸ್ಥಿರಗೊಳಿಸಿದೆ. ಮಾರುಕಟ್ಟೆಗಳಲ್ಲಿನ ನಗದು ಹರಿವಿನ ನಿಯಂತ್ರಣಕ್ಕಾಗಿ ರಿವರ್ಸ್ ರೆಪೋ ದರದಲ್ಲಿ 50ಬೇಸಿಸ್ ಪಾಯಿಂಟ್‌ಗಳನ್ನು ಹೆಚ್ಚಿಸಿ ಶೇ.5ಕ್ಕೆ ನಿಗದಿಪಡಿಸಿದೆ.

ಏತನ್ಮಧ್ಯೆ ದೇಶದ ಆರ್ಥಿಕ ಅಭಿವೃದ್ಧಿ ಸ್ಥಿರವಾಗಿದೆ. ಆದರೆ, ಇತ್ತೀಚೆಗೆ ಕೈಗಾರಿಕೆ ಅಭಿವೃದ್ಧಿಯಲ್ಲಿ ಕುಸಿತದ ಸಂಕೇತಗಳು ಕಂಡುಬರುತ್ತಿರುವುದು ಕಳವಳಕ್ಕೆ ಕಾರಣವಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.

ರಿಸರ್ವ್ ಬ್ಯಾಂಕ್, ಕಳೆದ ಜುಲೈ 27ರಂದು ಆರ್ಥಿಕ ಪರಿಷ್ಕರಣ ಸಭೆ ನಡೆಸಿ ರೆಪೋ ದರಗಳಲ್ಲಿ ಹೆಚ್ಚಳ ಘೋಷಿಸಿತ್ತು. ಹಣದುಬ್ಬರ ನಿರಂತರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಇದೀಗ ಒಂದುವರೆ ತಿಂಗಳ ಅವಧಿಯಲ್ಲಿ ಮತ್ತೆ ಪರಿಷ್ಕರಣ ಸಭೆಯಲ್ಲಿ ರೆಪೋ ದರಗಳನ್ನು ಹೆಚ್ಚಿಸಿದೆ.

ದೇಶದಲ್ಲಿರುವ ಬ್ಯಾಂಕ್‌ಗಳು ಬಡ್ಡಿ ದರ ಏರಿಕೆಯನ್ನು ಸ್ವಾಗತಿಸಿವೆ. ಆದರೆ, ಕಡಿಮೆ ಅವಧಿಗೆ ನಗದು ಹರಿವಿನ ಕೊರತೆಯಾಗುವ ಸಾಧ್ಯತೆಗಳಿವೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ