ನವದೆಹಲಿ, ಶುಕ್ರವಾರ, 17 ಸೆಪ್ಟೆಂಬರ್ 2010( 18:03 IST )
ರೈಲ್ವೆ ಇಲಾಖೆ ಸೆಪ್ಟೆಂಬರ್ ತಿಂಗಳ 1-10ರವರೆಗಿನ ಅವಧಿಯ ನಿವ್ವಳ ಲಾಭದಲ್ಲಿ ಶೇ.6.07ರಷ್ಟು ಏರಿಕೆಯಾಗಿದ್ದು, 2,293.41 ಕೋಟಿ ರೂಪಾಯಿ ನಿವ್ವಳ ಲಾಭಗಳಿಸಿದೆ. ಕಳೆದ ವರ್ಷದ ಇದೇ ಅವಧಿಯ ನಿವ್ವಳ ಲಾಭ 2,162.08 ರೂಪಾಯಿಗಳಾಗಿತ್ತು ಎಂದು ಮೂಲಗಳು ತಿಳಿಸಿವೆ.
ಸರಕು ಸಾಗಾಣೆ ಆದಾಯ ಸೆಪ್ಟೆಂಬರ್ 1-10ರ ಅವಧಿಯ ನಿವ್ವಳ ಲಾಭದಲ್ಲಿ ಶೇ.3.02ರಷ್ಟು ಏರಿಕೆಯಾಗಿ 1,458.79 ಕೋಟಿ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಇದೇ ಅವಧಿಯ ನಿವ್ವಳ ಲಾಭ 1,502.90 ಕೋಟಿ ರೂಪಾಯಿಗಳಿಗೆ ತಲುಪಿತ್ತು.
ಪ್ರಯಾಣಿಕ ಆದಾಯದಲ್ಲಿ ಶೇ.12.89ರಷ್ಟು ಏರಿಕೆಯಾಗಿ 705.88 ಕೋಟಿ ರೂಪಾಯಿಗಳಿಗೆ ತಲುಪಿದೆ.ಕಳೆದ ವರ್ಷದ ಅವಧಿಯ ನಿವ್ವಳ ಲಾಭ 625.28 ಕೋಟಿ ರೂಪಾಯಿಗಳಾಗಿತ್ತು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್ 1-10ರ ಅವಧಿಯಲ್ಲಿ ಮುಂಗಡ ಬುಕ್ಕಿಂಗ್ ಟಿಕೆಟ್ ಕಾಯ್ದಿರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.2.98ರಷ್ಟು ಏರಿಕೆಯಾಗಿ 214.58 ಮಿಲಿಯನ್‌ಗೆ ತಲುಪಿದೆ. ಕಳೆದ ವರ್ಷದ ಅವಧಿಯಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಕಾಯ್ದಿರಿಸಿರುವ ಪ್ರಯಾಣಿಕರ ಸಂಖ್ಯೆ 208.37 ಮಿಲಿಯನ್‌ಗಳಾಗಿತ್ತು.