ನವದೆಹಲಿ, ಶುಕ್ರವಾರ, 17 ಸೆಪ್ಟೆಂಬರ್ 2010( 18:37 IST )
ಪ್ರಸಕ್ತ ವರ್ಷದ ಅವಧಿಯಲ್ಲಿ ಸಕ್ಕರೆ ಉತ್ಪಾದನೆ 22-23 ಮಿಲಿಯನ್ ಟನ್‌ಗಳಿಗೆ ತಲುಪುವ ನಿರೀಕ್ಷೆಗಳಿವೆ ಎಂದು ಕೇಂದ್ರ ಆಹಾರ ಮತ್ತು ಕೃಷಿ ಖಾತೆ ಸಚಿವ ಶರದ್ ಪವಾರ್ ಹೇಳಿದ್ದಾರೆ.
ವಿಶ್ವದ ಎರಡನೇ ಬೃಹತ್ ಸಕ್ಕರೆ ಉತ್ಪಾದಕ ರಾಷ್ಟ್ರವಾದ ಭಾರತ, ಪ್ರಸಕ್ತ ವರ್ಷದ ಋತುವಿನಲ್ಲಿ ಸಕ್ಕರೆ ಉತ್ಪಾದನೆ ಸೆಪ್ಟೆಂಬರ್ 30ಕ್ಕೆ ಅಂತ್ಯಗೊಂಡಂತೆ 18.8 ಮಿಲಿಯನ್ ಟನ್‌ಗಳಿಗಿಂತ ಹೆಚ್ಚಳವಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ವರ್ಷದ ಅವಧಿಯಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದರಿಂದ, ವರ್ಷಾಂತ್ಯದವರೆಗೆ 22-23 ಮಿಲಿಯನ್ ಟನ್ ಸಕ್ಕರೆ ಉತ್ಪಾದಿಸುವ ನಿರೀಕ್ಷೆಗಳಿವೆ ಎಂದು ಪವಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಏತನ್ಮಧ್ಯೆ ಕೈಗಾರಿಕೋದ್ಯಮ ಸಂಘಟನೆಯಾದ ಐಎಸ್‌ಎಂಎ, ಪ್ರಸಕ್ತ ವರ್ಷದ ಅವಧಿಯಲ್ಲಿ ಸಕ್ಕರೆ ಉತ್ಪಾದನೆ 25.5 ಮಿಲಿಯನ್ ಟನ್‌ಗಳಿಗೆ ತಲುಪುವ ಸಾಧ್ಯತೆಗಳಿವೆ ಎಂದು ಹೇಳಿಕೆ ನೀಡಿದೆ.