ಮೊಬೈಲ್ ಫೋನ್ ಉತ್ಪಾದಕ ಸಂಸ್ಥೆಯಾದ ಮೋಟೋರೋಲಾ, ವಹಿವಾಟು ವಿಸ್ತರಿಸುವ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಮುಂದಿನ ವರ್ಷದ ಆರಂಭದಲ್ಲಿ ಟ್ಯಾಬ್ಲೆಟ್ ಕಂಪ್ಯೂಟರ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗುವುದು ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಅತ್ಯಾಧುನಿಕ ತಂತ್ರಜ್ಞಾನದ ಟ್ಯಾಬ್ಲೆಟ್ ಕಂಪ್ಯೂಟರ್‌ಗಳನ್ನು, ಸ್ಪರ್ಧಾತ್ಮಕ ಮಾರುಕಟ್ಟೆಗೆ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ. ಮುಂಬರುವ ಕೆಲ ತಿಂಗಳುಗಳಲ್ಲಿ ಸಂಪೂರ್ಣ ಮಾಹಿತಿಗಳನ್ನು ಬಹಿರಂಗಪಡಿಸಲಾಗುವುದು ಎಂದು ಮೋಟೋರೋಲಾ ಭಾರತದ ಸಹಾಯಕ-ಮುಖ್ಯ ಕಾರ್ಯನಿರ್ವಾಹಕ ಅದಿಕಾರಿ ಸಂಜಯ್ ಝಾ ತಿಳಿಸಿದ್ದಾರೆ.
ಮುಂಬರುವ ವರ್ಷದ ಆರಂಭದ ತಿಂಗಳುಗಳಲ್ಲಿ ಟ್ಯಾಬ್ಲೆಟ್ ಕಂಪ್ಯೂಟರ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುವ ಯೋಜನೆಗಳಿದ್ದು, ಕಳೆದ ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾದ ಆಪಲ್ ಐಪ್ಯಾಡ್ ಮಾರುಕಟ್ಟೆಯಲ್ಲಿ ಪ್ರಾಬಲ್ಯವನ್ನು ಸಾಧಿಸಿದ್ದು, ಅದಕ್ಕೆ ತಕ್ಕ ಉತ್ತರ ನೀಡಲಿದೆ ಎಂದು ಝಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಜೂನ್ ತಿಂಗಳ ಅವಧಿಯಲ್ಲಿ 30ಲಕ್ಷ ಐಪ್ಯಾಡ್ ಟ್ಯಾಬ್ಲೆಟ್‌ಗಳನ್ನು ಮಾರಾಟ ಮಾಡಲಾಗಿದೆ ಎಂದು ಆಪಲ್ ಕಂಪೆನಿ ಘೋಷಿಸಿತ್ತು.