ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 15 ಪೈಸೆ ಏರಿಕೆಯಾಗಿ 45.55 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 13 ಪೈಸೆ ಏರಿಕೆ ಕಂಡು 45.70/71 ರೂಪಾಯಿಗಳಿಗೆ ತಲುಪಿತ್ತು.ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 15 ಪೈಸೆ ಏರಿಕೆಯಾಗಿ 45.55 ರೂಪಾಯಿಗಳಿಗೆ ತಲುಪಿದೆ.
ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿದ್ದರಿಂದ, ಡಾಲರ್ ಎದುರು ರೂಪಾಯಿ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಅದನ್ನು ಹೊರತುಪಡಿಸಿ, ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ರೂಪಾಯಿ ಮೌಲ್ಯದ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 135.42 ಪಾಯಿಂಟ್‌ಗಳಿಗೆ ಏರಿಕೆ ಕಂಡು 20,041.52 ಅಂಕಗಳಿಗೆ ತಲುಪಿದೆ.