ವಿದೇಶಿ ಬಂಡವಾಳದ ಒಳಹರಿವು ನಿರಂತರ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 14 ಪೈಸೆ ಏರಿಕೆಯಾಗಿ 45.53 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ರೂಪಾಯಿ 3 ಪೈಸೆ ಏರಿಕೆ ಕಂಡು 45.67/68 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 14 ಪೈಸೆ ಏರಿಕೆಯಾಗಿ 45.53 ರೂಪಾಯಿಗಳಿಗೆ ತಲುಪಿದೆ.
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಕುಸಿತವಾಗಿದ್ದರಿಂದ, ರೂಪಾಯಿ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 103.99 ಪಾಯಿಂಟ್‌ಗಳ ಏರಿಕೆ ಕಂಡು 20,105.54 ಅಂಕಗಳಿಗೆ ತಲುಪಿದೆ.