ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (US dollar| Sensex | Interbank foreign exchange)
Bookmark and Share Feedback Print
 
ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ ನಿರಂತರ ಆರು ದಿನಗಳ ವಹಿವಾಟಿನಲ್ಲಿ ಡಾಲರ್ ಎದುರಿಗೆ ಚೇತರಿಸಿಕೊಂಡ ರೂಪಾಯಿ ಮೌಲ್ಯ, ಇಂದಿನ ಆರಂಭಿಕ ವಹಿವಾಟಿನಲ್ಲಿ 6 ಪೈಸೆ ಕುಸಿತ ಕಂಡು 45.64 ರೂಪಾಯಿಗಳಿಗೆ ತಲುಪಿದೆ

ದೇಶದ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಶೇರುಪೇಟೆಯ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಕುಸಿತವಾಗಿದ್ದರಿಂದ,ರೂಪಾಯಿ ಮೌಲ್ಯ ಮತ್ತಷ್ಟು ಕುಸಿಯುವುದನ್ನು ತಡೆದಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ 9 ಪೈಸೆ ಏರಿಕೆ ಕಂಡು 45.58/59 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ 6 ಪೈಸೆ ಕುಸಿತ ಕಂಡು 45.64 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 86.18 ಪಾಯಿಂಟ್‌ಗಳ ಕುಸಿತ ಕಂಡು 19,855.54 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ