ಸರಕಾರಿ ಹಾಗೂ ಕಾರ್ಪೋರೇಟ್ ಕಂಪೆನಿಗಳ ವಿದೇಶಿ ಬಂಡವಾಳ ಹೂಡಿಕೆಯ ಮಿತಿಯನ್ನು ಹೆಚ್ಚಿಸಲು ಸರಕಾರ ನಿರ್ಧರಿಸಿದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 13 ಪೈಸೆ ಏರಿಕೆಯಾಗಿ 45.52 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ, ಮಾಸಾಂತ್ಯದಿಂದಾಗಿ ಬ್ಯಾಂಕ್ ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ರೂಪಾಯಿ ಮೌಲ್ಯ ಮತ್ತಷ್ಟು ಚೇತರಿಕೆಯಾಗುವುದನ್ನು ತಡೆದಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ 7 ಪೈಸೆ ಕುಸಿತ ಕಂಡು 45.65/66 ರೂಪಾಯಿಗಳಿಗೆ ತಲುಪಿದೆ.
ಸರಕಾರಿ ಹಾಗೂ ಕಾರ್ಪೋರೇಟ್ ಕಂಪೆನಿಗಳ ವಿದೇಶಿ ಬಂಡವಾಳ ಹೂಡಿಕೆಯ ಮಿತಿಯನ್ನು ಹೆಚ್ಚಿಸಲು ಸರಕಾರ ನಿರ್ಧರಿಸಿದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 27.49 ಪಾಯಿಂಟ್‌ಗಳ ಏರಿಕೆ ಕಂಡು 19,833.52 ಅಂಕಗಳಿಗೆ ತಲುಪಿದೆ.