ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಹುಂಡೈನಿಂದ ಪ್ರತಿ ವರ್ಷ ನೂತನ ಕಾರು ಬಿಡುಗಡೆ (Hyundai | Market share | Small car market)
Bookmark and Share Feedback Print
 
ದೇಶದಲ್ಲಿ ಸಣ್ಣ ಕಾರುಗಳ ಮಾರುಕಟ್ಟೆ ವೇಗವಾಗಿ ಚೇತರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ, ಪ್ರತಿ ವರ್ಷ 2-3 ನೂತನ ಮಾಡೆಲ್‌ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಹುಂಡೈ ಕಂಪೆನಿ ಮೂಲಗಳು ತಿಳಿಸಿವೆ.

ದೇಶದಲ್ಲಿ ಕಾರುಗಳ ಮಾರುಕಟ್ಟೆ ನಿರೀಕ್ಷೆಗಿಂತ ವೇಗವಾಗಿ ಸಾಗುತ್ತಿರುವುದರಿಂದ ಪ್ರತಿ ವರ್ಷ 2ರಿಂದ 3 ಹೊಸ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿ, ಮಾರುಕಟ್ಟೆಯಲ್ಲಿ ಸಿಂಹಪಾಲನ್ನು ಹೊಂದಲು ಯೋಜನೆಗಳನ್ನು ರೂಪಿಸಲಾಗುವುದು ಎಂದು ಹುಂಡೈ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾನ್ -ವೂ-ಪರ್ಕ್ ತಿಳಿಸಿದ್ದಾರೆ.

ಪ್ರಸ್ತುತ ದೇಶಿಯ ಕಾರುಗಳ ಮಾರುಕಟ್ಟೆಯಲ್ಲಿ ಹುಂಡೈ ಕಂಪೆನಿ ಶೇ.20.5ರಷ್ಟು ಪಾಲನ್ನು ಹೊಂದಿದೆ. ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಚೇತರಿಕೆ ಕಾಣುವ ಸಾಧ್ಯತೆಗಳಿವೆ ಎಂದು ಹುಂಡೈ ತಿಳಿಸಿದೆ.

ಮುಂದಿನ ತಿಂಗಳ ಅವಧಿಯಲ್ಲಿ ಸ್ಪೋರ್ಟ್ಸ್ ಸಾಂತಾ ಫೆ ಕಾರನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗುವುದು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾನ್ -ವೂ-ಪರ್ಕ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ