ಹಿಂದಿನ ದಿನದ ವಹಿವಾಟಿನಲ್ಲಿ ನಾಲ್ಕು ತಿಂಗಳ ಗರಿಷ್ಠ ಏರಿಕೆ ಕಂಡಿದ್ದ ಫಾರೆಕ್ಸ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ, ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 14 ಪೈಸೆ ಕುಸಿತವಾಗಿ 45.15 ರೂಪಾಯಿಗಳಿಗೆ ತಲುಪಿದೆ.
ಅದನ್ನು ಹೊರತುಪಡಿಸಿ, ಶೇರುಪೇಟೆಗಳ ದುರ್ಬಲ ವಹಿವಾಟಿು ಕೂಡಾ ರೂಪಾಯಿ ಮೌಲ್ಯದಲ್ಲಿ ಮತ್ತಷ್ಟು ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಡಾಲರ್ ಎದುರಿಗೆ ಏಷ್ಯಾದ ಇತರ ಕರೆನ್ಸಿಗಳ ಮೌಲ್ಯದಲ್ಲಿ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 24 ಪೈಸೆ ಏರಿಕೆ ಕಂಡು 45.01/02 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 14 ಪೈಸೆ ಕುಸಿತವಾಗಿ 45.15 ರೂಪಾಯಿಗಳಿಗೆ ತಲುಪಿದೆ.