ಆದಾಯ ತೆರಿಗೆ ರಿಟರ್ನ್ಸ್ ಪಾವತಿ ದಿನಾಂಕ ಅ.15ರವರೆಗೆ ವಿಸ್ತರಣೆ
ನವದೆಹಲಿ, ಮಂಗಳವಾರ, 28 ಸೆಪ್ಟೆಂಬರ್ 2010( 18:17 IST )
ದೇಶದ ವಿವಿಧ ಭಾಗಗಳಲ್ಲಿ ಪ್ರವಾಹ ಪ್ರಕೋಪದ ಹಿನ್ನೆಲೆಯಲ್ಲಿ, ಆದಾಯ ತೆರಿಗೆ ರಿಟರ್ನ್ಸ್ ಪಾವತಿಯನ್ನು 15 ದಿನಗಳ ಅವಧಿಗೆ ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ.
2010-11ರ ಆದಾಯ ತೆರಿಗೆ ರಿಟರ್ನ್ಸ್ ಪಾವತಿಯ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30ರಿಂದ ಅಕ್ಟೋಬರ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ದೇಶದ ಉತ್ತರ ಭಾರತ ಸೇರಿದಂತೆ ಹಲವು ಭಾಗಗಳಲ್ಲಿ ಪ್ರವಾಹ ಪ್ರಕೋಪಗಳಿಂದಾಗಿ, ಜನಜೀವನ ಅಸ್ತವ್ಯಸ್ಥವಾಗಿದ್ದರಿಂದ, ದಿನಾಂಕ ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಕಾಶ್ಮಿರದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಎದುರಾಗಿದ್ದರಿಂದ, ಆದಾಯ ತೆರಿಗೆ ಪಾವತಿಯ ಕೊನೆಯ ದಿನಾಂಕವನ್ನು ನವೆಂಬರ್ 30ರ ವರೆಗೆ ವಿಸ್ತರಿಸಿ ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ತೆರಿಗೆ ಆದೇಶ ಹೊರಡಿಸಿದೆ.