ಶೇರುಪೇಟೆಗಳ ದುರ್ಬಲ ವಹಿವಾಟು ಹಾಗೂ ಮಾಸಾಂತ್ಯದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 14 ಪೈಸೆ ಕುಸಿತ ಕಂಡು 45.15/16 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ, ಡಾಲರ್ ಎದುರಿಗೆ ರೂಪಾಯಿ 64ಪೈಸೆ ಏರಿಕೆ ಕಂಡಿದೆ ಎಂದು ಮಾರುಕಟ್ಚೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಾಸಾಂತ್ಯದ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳು ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ.