ದೇಶದ ಸಾರ್ವಜನಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾ, ರಿಯಾಯತಿ ಗೃಹಸಾಲದ ಅವಧಿಯನ್ನು ಡಿಸೆಂಬರ್‌ವರೆಗೆ ವಿಸ್ತರಿಸಲಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ಹೇಳಿದ್ದಾರೆ.
ರಿಯಾಯಿತಿ ಗೃಹಸಾಲದ ಅವಧಿಯನ್ನು ಡಿಸೆಂಬರ್‌ವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಎಸ್‌ಬಿಐ ಮುಖ್ಯಸ್ಥ ಒ.ಪಿ.ಭಟ್ ತಿಳಿಸಿದ್ದಾರೆ.
ಜನಪ್ರಿಯವಾದ ಗೃಹಸಾಲ ಮತ್ತು ಕಾರು ಸಾಲದ ರಿಯಾಯಿತಿ ದರ ಸೆಪ್ಟೆಂಬರ್ 30ಕ್ಕೆ ಅಂತ್ಯಗೊಳಿಸಲು ಈ ಮೊದಲು ನಿರ್ಧರಿಸಲಾಗಿತ್ತು.ಆದರೆ, ಗ್ರಾಹಕರ ಬೇಡಿಕೆಯ ಹಿನ್ನೆಲೆಯಲ್ಲಿ ಮೂರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಖಾಸಗಿ ಕ್ಷೇತ್ರದ ಪ್ರಮುಖ ಬ್ಯಾಂಕ್ ಎಚ್‌ಡಿಎಫ್‌ಸಿ ಬ್ಯಾಂಕ್, ಗೃಹಸಾಲದ ರಿಯಾಯಿತಿ ದರಗಳನ್ನು ಮುಂದುವರಿಸಲು ನಿರ್ಧರಿಸಿದ್ದರಿಂದ ಬ್ಯಾಂಕ್ ಕ್ಷೇತ್ರಗಳಲ್ಲಿ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.
ಎಸ್‌ಬಿಐನಿಂದ ಮೊದಲ ವರ್ಷದ ಗೃಹಸಾಲಕ್ಕೆ ಶೇ.8ರಷ್ಟು ಬಡ್ಡಿದರ, ಎರಡನೇ ಹಾಗೂ ಮೂರನೇ ವರ್ಷಕ್ಕೆ ಶೇ.9ರ ಬಡ್ಡಿದರವನ್ನು ನಿಗದಿಪಡಿಸಿದೆ.