ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಕಿಂಗ್‌ಫಿಶರ್ ಸಿಇಒ ಸ್ಥಾನಕ್ಕೆ ಸಂಜಯ್ ಅಗರ್‌ವಾಲ್ ನೇಮಕ (Kingfisher Airlines | Sanjay Aggarwal | Appointed | CEO)
Bookmark and Share Feedback Print
 
ದೇಶದ ಖಾಸಗಿ ವಿಮಾನಯಾನ ಸಂಸ್ಥೆಯಾದ ಕಿಂಗ್‌ಫಿಶರ್ ಏರ್‌ಲೈನ್ಸ್‌, ಸಂಜಯ್ ಅಗರ್‌ವಾಲ್‌ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ಸಂಜಯ್ ಅಗರ್‌ವಾಲ್ ಅವರನ್ನು ಕಿಂಗ್‌ಫಿಶರ್ ಏರ್‌ಲೈನ್ಸ್ ಸಂಸ್ಥೆಯ ಸಿಇಒ ಸ್ಥಾನಕ್ಕೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಏರ್‌ಲೈನ್ಸ್‌ನ ವಕ್ತಾರರು ತಿಳಿಸಿದ್ದಾರೆ.

ಮತ್ತೊಂದು ಖಾಸಗಿ ವಿಮಾನಯಾನ ಸಂಸ್ಥೆಯಾದ ಸ್ಪೈಸ್‌ಜೆಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಗರ್‌ವಾಲ್ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

2005ರಲ್ಲಿ ಸ್ಪೈಸ್ ಜೆಟ್ ಸಂಸ್ಥೆಗೆ ಸೇರ್ಪಡೆಯಾಗಿದ್ದ ಅಗರ್‌ವಾಲ್, ಸಂಸ್ಥೆಯನ್ನು ಲಾಭದತ್ತ ಮರಳಿಸುವಲ್ಲಿ ಯಶಸ್ವಿಯಾಗಿದ್ದರು.ನಂತರ ಸ್ಪೈಸ್ ಜೆಟ್ ಸಂಸ್ಥೆಯನ್ನು ಮಾಧ್ಯಮ ಕಿಂಗ್ ಕಲಾನಿಧಿ ಮಾರನ್ ಖರೀದಿಸಿದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಏರ್‌ಲೈನ್ ಇಂಡಸ್ಟ್ರೀಸ್ ತಜ್ಞರ ಪ್ರಕಾರ, ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಿಂಗ್‌ಫಿಶರ್ ಏರ್‌ಲೈನ್ಸ್‌ಗೆ ಲಾಭದತ್ತ ಮರಳಿಸುವುದು ಕಠಿಣ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ