ಕೇಂದ್ರ ಸರಕಾರ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟಕ್ಕಾಗಿ 19.98 ಲಕ್ಷ ಟನ್‌ಗಳಷ್ಟು ಸಕ್ಕರೆಯನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಕಳೆದ ತಿಂಗಳಿಗೆ ಹೋಲಿಸಿದಲ್ಲಿ 98,000 ಟನ್ ಹೆಚ್ಚಿನ ಸಕ್ಕರೆಯನ್ನು ಬಿಡುಗಡೆ ಮಾಡಲಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ
ಅಕ್ಟೋಬರ್ ತಿಂಗಳ ಅವಧಿಯಲ್ಲಿ ದೇಶದ ಆಂತರಿಕ ಬೇಡಿಕೆಯಾದ 19.98 ಲಕ್ಷ ಟನ್ ಸಕ್ಕರೆ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವಾಲಯ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಒಂದು ವೇಳೆ ಸಕ್ಕರೆ ದರದಲ್ಲಿ ಏರಿಕೆಯಾದಲ್ಲಿ, ಮತ್ತಷ್ಟು ಹೆಚ್ಚುವರಿ ಸಕ್ಕರೆಯನ್ನು ಬಿಡುಗಡೆ ಮಾಡಲು ಹಿಂಜರಿಯುವುದಿಲ್ಲ ಎಂದು ಹೇಳಿಕೆ ನೀಡಿದೆ.
2.48 ಲಕ್ಷ ಟನ್ ಸಕ್ಕರೆಯನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಬಿಡುಗಡೆಗೊಳಿಸಲಾಗುವುದು.17.50 ಲಕ್ಷ ಟನ್ ಸಕ್ಕರೆಯನ್ನು ಮುಕ್ತ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ, ಸೆಪ್ಟೆಂಬರ್ ತಿಂಗಳ ಅವಧಿಯಲ್ಲಿ 19 ಲಕ್ಷ ಟನ್ ಸಕ್ಕರೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.