ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಬಡ್ಡಿ ದರ ಏರಿಕೆ ಘೋಷಣೆ (HDFC Bank | Lending rate | Raise | Policy)
Bookmark and Share Feedback Print
 
ದೇಶದ ಖಾಸಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಎರಡನೇ ಸ್ಥಾನದಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್, 25 ಬೇಸಿಸ್ ಪಾಯಿಂಟ್‌ಗಳಷ್ಟು ಏರಿಕೆ ಘೋಷಿಸಿದ್ದು, ಇಂದಿನಿಂದ ಸಾಲದ ಬಡ್ಡಿ ದರ ಶೇ.7.50ಕ್ಕೆ ನಿಗದಿಪಡಿಸಲಾಗಿದೆ ಎಂದು ಬ್ಯಾಂಕ್‌ನ ಉನ್ನತ ಅಧಿಕಾರಿಗಳು ಹೇಳಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಕಳೆದ ಮಾರ್ಚ್ ತಿಂಗಳಿನಿಂದ 125 ಬೇಸಿಸ್ ಪಾಯಿಂಟ್‌ಗಳಷ್ಟು ರೆಪೋ ದರಗಳಲ್ಲಿ ಹೆಚ್ಚಳ ಘೋಷಿಸಿದ್ದರಿಂದ,ಎಚ್‌ಡಿಎಫ್‌ಸಿ ಬ್ಯಾಂಕ್‌ ಅನಿವಾರ್ಯವಾಗಿ ಬಡ್ಡಿ ದರದಲ್ಲಿ ಹೆಚ್ಚಳ ಘೋಷಿಸಿದೆ ಎಂದು ಮೂಲಗಳು ತಿಳಿಸಿವೆ.

ಎಚ್‌ಡಿಎಫ್‌ಸಿ ಬ್ಯಾಂಕ್, ಠೇವಣಿ ಬಡ್ಡಿ ದರಗಳಲ್ಲಿ 50 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಳಗೊಳಿಸಿ, ಸೆಪ್ಟೆಂಬರ್ 24 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ