ಜಾಗತಿಕ ಆರ್ಥಿಕ ಕುಸಿತದಿಂದಾಗಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಾಫ್ಟ್‌ವೇರ್ ಕ್ಷೇತ್ರದ ಉದ್ಯೋಗಿಗಳು ಭಾರಿ ಆತಂಕವನ್ನು ಎದುರಿಸಿದ್ದರು. ಇದೀಗ ಮತ್ತೆ ಸಿಹಿ ಸುದ್ದಿ ಪ್ರಕಟವಾಗಿದ್ದು, ದೇಶದ ಪ್ರಮುಖ ಐಟಿ ಕಂಪೆನಿಗಳು ಪ್ರಸಕ್ತ ವರ್ಷದ ಅವಧಿಯಲ್ಲಿ 90,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿವೆ.
ದೇಶದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕಂಪೆನಿಗಳಾದ ಟಾಟಾ ಕನ್ಸಲ್‌ಟನ್ಸಿ ಸರ್ವಿಸಸ್, ಇನ್ಫೋಸಿಸ್ ಮತ್ತು ವಿಪ್ರೋ ಕಂಪೆನಿಗಳು ಪ್ರಸಕ್ತ ವರ್ಷದ ಅವಧಿಯಲ್ಲಿ 90,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿವೆ. ಕಳೆದ ವರ್ಷದಲ್ಲಿ 20,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗಿತ್ತು.
ಕಳೆದ 2008ರ ಅವಧಿಯಲ್ಲಿ ಜಾಗತಿಕ ಆರ್ಥಿಕ ಕುಸಿತದ ನಂತರ, ಮೊದಲ ಬಾರಿಗೆ ಐಟಿ ಕಂಪೆನಿಗಳು ಬೃಹತ್ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿವೆ.
ಉದ್ಯೋಗ ನೇಮಕಾತಿ ಸಂಸ್ಥೆಗಳ ಪ್ರಕಾರ, ಸೆಪ್ಟೆಂಬರ್ ತಿಂಗಳ ಅವಧಿಯಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವಹಿವಾಟಿನಲ್ಲಿ ಭಾರಿ ಚೇತರಿಕೆಯಾಗಿದ್ದರಿಂದ, ಉದ್ಯೋಗಿಗಳ ನೇಮಕಾತಿಯಲ್ಲಿ ತೊಡಗಿವೆ ಎಂದು ಹೇಳಿದ್ದಾರೆ.