ಸೀಜನ್ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಆಭರಣಗಳ ತಯಾರಕರು ಮತ್ತು ಚಿನ್ನದ ಸಂಗ್ರಹಕಾರರಿಂದ ಚಿನ್ನದ ಖರೀದಿಯಲ್ಲಿ ಏರಿಕೆಯಾಗಿದ್ದರಿಂದ, ಚಿನ್ನದ ದರ ಇಂದಿನ ಆರಂಭಿಕ ವಹಿವಾಟಿನಲ್ಲಿ ಪ್ರತಿ 10 ಗ್ರಾಂಗೆ 105 ರೂಪಾಯಿಗಳಷ್ಟು ಏರಿಕೆಯಾಗಿ 19,920 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ ದಾಖಲೆಯ ಏರಿಕೆ ಕಂಡಿದ್ದ ಬೆಳ್ಳಿಯ ದರ, ಇಂದಿನ ಆರಂಭಿಕ ವಹಿವಾಟಿನಲ್ಲಿ ಪ್ರತಿ ಕೆಜಿಗೆ 200 ರೂಪಾಯಿಗಳಷ್ಟು ಏರಿಕೆಯಾಗಿ 35,400 ರೂಪಾಯಿಗಳಿಗೆ ತಲುಪಿದೆ.
ಸೀಜನ್ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಆಭರಣಗಳ ತಯಾರಕರು ಮತ್ತು ಚಿನ್ನದ ಸಂಗ್ರಹಕಾರರಿಂದ ಚಿನ್ನದ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ, ಚಿನ್ನದ ದರದಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸಾಗರೋತ್ತರ ಮಾರುಕಟ್ಟೆಯಲ್ಲಿ, ಚಿನ್ನದ ದರ ಪ್ರತಿ ಔನ್ಸ್‌ಗೆ 10.30 ಡಾಲರ್‌ಗಳ ಏರಿಕೆಯಾಗಿ 1,343.60 ಡಾಲರ್‌ಗಳಿಗೆ ತಲುಪಿದೆ.