ಭಾರತ ಪೆಟ್ರೋಲೀಯಂ ಕಾರ್ಪೋರೇಶನ್ ಲಿಮಿಟೆಡ್ ಪೆಟ್ರೋಲ್ ದರ ಏರಿಕೆ ಘೋಷಿಸಿದ ನಂತರ, ಇದೀಗ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಕೂಡಾ ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 72 ಪೈಸೆ ಹೆಚ್ಚಳ ಘೋಷಿಸಿದೆ.
ಇಂಡಿಯನ್ ಆಯಿಲ್ ಕಾರ್ಪೋರೇಶನ್ ಮೂಲಗಳ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 52.55 ರೂಪಾಯಿಗಳಿಗೆ ತಲುಪಿದ್ದು, ಇತರ ನಗರಗಳಲ್ಲಿ ಆಯಾ ರಾಜ್ಯಗಳ ಸ್ಥಳೀಯ ತೆರಿಗೆಗಳನ್ನು ಅವಲಂಬಿಸಿರುತ್ತದೆ ಎಂದು ಹೇಳಿಕೆ ನೀಡಿದೆ.
ಏತನ್ಮಧ್ಯೆ, ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್, ಕಳೆದ ಶುಕ್ರವಾರದಂದು ಪ್ರತಿ ಲೀಟರ್ ಪೆಟ್ರೋಲ್ ದರದಲ್ಲ 70 ಪೈಸೆ ಹೆಚ್ಚಳ ಘೋಷಿಸಿದೆ. ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಶನ್ ಕೂಡಾ ಒಂದೆರಡು ದಿನಗಳಲ್ಲಿ ದರ ಹೆಚ್ಚಳ ಘೋಷಿಸುವ ನಿರೀಕ್ಷೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ 80 ಡಾಲರ್‌ಗಳಿಗೆ ತಲುಪಿದ ಹಿನ್ನೆಲೆಯಲ್ಲಿ, ದೇಶದ ಪ್ರಮುಖ ತೈಲ ಕಂಪೆನಿಗಳು ಪ್ರತಿ ಲೀಟರ್‌ಗೆ 1 ರೂಪಾಯಿ ನಷ್ಟ ಅನುಭವಿಸುತ್ತಿವೆ.