ಹಲವಾರು ರಾಷ್ಟ್ರಗಳ ಮಧ್ಯದ ಕರೆನ್ಸಿ-ಸಂಘರ್ಷಗಳ ಮಧ್ಯೆಯು ಜಾಗತಿಕ ಆರ್ಥಿಕ ಚೇತರಿಕೆಗಾಗಿ ತೆಗೆದುಕೊಳ್ಳುವ ಕ್ರಮಗಳ ಕುರಿತಂತೆ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್)ಚೀನಾದ ಸೆಂಟ್ರಲ್ ಬ್ಯಾಂಕ್ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪೀಪಲ್ಸ್ ಬ್ಯಾಂಕ್ ಆಫ್ ಚೀನಾ ಸಭೆಯ ಆತಿಥ್ಯವನ್ನು ವಹಿಸಿದ್ದು,ಏಷ್ಯಾ, ಆಫ್ರಿಕಾ, ಯುರೋಪ್,ಉತ್ತರ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರಗಳ ಸೆಂಟ್ರಲ್ ಬ್ಯಾಂಕ್ಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೀಪಲ್ಸ್ ಬ್ಯಾಂಕ್ ಆಫ್ ಚೀನಾದ ಮುಖ್ಯಸ್ಥ ಝೊವು ಝಿಯಾವೊಚೆನ್ ಮತ್ತು ಐಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸ್ಟ್ರಾಸ್-ಖಾನ್ ಸಭೆಯ ನೇತೃತ್ವ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.