ಗೃಹ ಸಾಲ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಲಾಭಾಂಶದಲ್ಲಿ ಏರಿಕೆಯಾಗಿದ್ದರಿಂದ, ಎಚ್‌ಡಿಎಫ್‌ಸಿ ಬ್ಯಾಂಕ್, ಸೆಪ್ಟೆಂಬರ್ 2010ಕ್ಕೆ ತ್ರೈಮಾಸಿಕ ಅಂತ್ಯಗೊಂಡಂತೆ ನಿವ್ವಳ ಲಾಭದಲ್ಲಿ ಶೇ.22ರಷ್ಟು ಏರಿಕೆಯಾಗಿ 808 ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷದ ಎರಡನೇ ತ್ರೈಮಾಸಿಕ ಅವಧಿಯಲ್ಲಿ 2,850 ಕೋಟಿ ರೂ ನಿವ್ವಳ ಆದಾಯ ಗಳಿಸಿದ್ದ ಬ್ಯಾಂಕ್, ಪ್ರಸಕ್ತ ವರ್ಷದ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ.4ರಷ್ಟು ಏರಿಕೆ ಕಂಡು 2,970 ಕೋಟಿ ರೂಪಾಯಿಗಳಿಗೆ ತಲುಪಿದೆ.
ಸಾಲದ ಬೇಡಿಕೆಯಲ್ಲಿ ಹೆಚ್ಚಳ ಮತ್ತು ಠೇವಣಿ ಸಂಗ್ರಹದಲ್ಲಿ ಚೇತರಿಕೆಯಾಗಿದ್ದರಿಂದ, ಎರಡನೇ ತ್ರೈಮಾಸಿಕ ಅವಧಿಯ ನಿವ್ವಳ ಲಾಭದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 30ಕ್ಕೆ ಅಂತ್ಯಗೊಂಡಂತೆ ಬ್ಯಾಂಕ್‌ನ ಸಾಲ ನೀಡಿಕೆ ಮೊತ್ತ 1.07ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ.ಕಳೆದ ವರ್ಷದ ಸೆಪ್ಟೆಂಬರ್ ತಿಂಗಳ ಅವಧಿಯಲ್ಲಿ 89,519 ಕೋಟಿ ರೂಪಾಯಿಗಳಾಗಿತ್ತು ಎಂದು ಎಚ್‌ಡಿಎಫ್‌ಸಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಕೇಕಿ ಮಿಸ್ತ್ರಿ ಹೊರಡಿಸಿದ ಪ್ರಕಟಣೆಯಲ್ಲಿ ವಿವರಣೆ ನೀಡಿದ್ದಾರೆ.