ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಜೆಟ್‌ ಏರ್‌ವೇಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.37ರಷ್ಟು ಹೆಚ್ಚಳ (Jet Airways Ltd | Private carrier | Passenger traffic)
Bookmark and Share Feedback Print
 
ದೇಶದ ಖಾಸಗಿ ವಿಮಾನಯಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಜೆಟ್‍ ಏರ್‌ವೇಸ್, ಸೆಪ್ಟೆಂಬರ್ ತಿಂಗಳ ಅವಧಿಯ ದೇಶಿಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.37.1ರಷ್ಟು ಹೆಚ್ಚಳವಾಗಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.36.4ರಷ್ಟು ಏರಿಕೆಯಾಗಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ಜೆಟ್‌ಏರ್‌ವೇಸ್, ಪ್ರಯಾಣಿಕರ ಸಂಖ್ಯೆಯಲ್ಲಿ ಸತತ 11 ತಿಂಗಳ ಅವಧಿಯಲ್ಲಿ ನಿರಂತರವಾಗಿ ಏರಿಕೆ ಕಾಣುತ್ತಿದೆ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ಜೆಟ್‌ಏರ್‌ವೇಸ್ ಗ್ರೂಪ್‌ನ ಸಹೋದರ ಸಂಸ್ಥೆಯಾದ ಜೆಟ್‌ ಲೈಟ್, ಸೆಪ್ಟೆಂಬರ್ ತಿಂಗಳ ಅವಧಿಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.26.9ರಷ್ಟು ಹೆಚ್ಚಳವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ