ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ (Rupee | Interbank foreign exchange market | Forex | Dollar)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹಾಗೂ ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಏರಿಕೆಯಾಗಿ 44.30 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ಅಲ್ಪ ಕುಸಿತ ಕಂಡು 44.34/35 ರೂಪಾಯಿಗಳಿಗೆ ತಲುಪಿದೆ. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಏರಿಕೆಯಾಗಿ 44.30 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಒಳಹರಿವು ಹಾಗೂ ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ಚೇತರಿಕೆಯಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ಫಾರೆಕ್ಸ್ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 87.49 ಪಾಯಿಂಟ್‌ಗಳ ಏರಿಕೆ ಕಂಡು 19,959.64 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ